ಮಂಗಳೂರು, ಮೇ 31 (DaijiworldNews/PY) : ಅರಬ್ಬೀ ಸಮುದ್ರದ ಮೇಲ್ಮೈಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ಕರ್ನಾಟಕ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಮೇ 31ರಿಂದ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, 115.6 ಮಿ.ಮೀ ನಿಂದ 204.4 ಮಿ.ಮಿವರೆಗೆ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರು ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ.