ಕೋಟ, ಜೂ 01 (Daijiworld News/MSP): ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಲ್ಲಿ ಕೊರೊನಾ ಸೋಂಕು ದೃಢಟ್ಟಿದ್ದು, ಅವರು ವಾಸವಾಗಿದ್ದ ಕೋಟತಟ್ಟು ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಟತಟ್ಟು ವಿನ ಸ್ಥಳೀಯರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದ್ದು, ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿಗಳು ಸುತ್ತಲಿನ ಸ್ಥಳವನ್ನು ಸ್ಯಾನಿಟೈಸ್ ಮಾಡಿದ್ದಾರೆ.