ಮಂಗಳೂರು, ಜೂ. 01 (Daijiworld News/MB) : ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೆಲವೊಂದು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಪ್ರವಾಹ, ಚಂಡಮಾರುತ ಬಂದರೆ ಎದುರಿಸಲು ಸಿದ್ದ ಎಂದು ಹೇಳಿದರು.