ಮಂಗಳೂರು, ಜೂ 01 (DaijiworldNews/SM): ಕೇಂದ್ರ ಸರಕಾರ ಈಗಾಗಲೇ ಜೂನ್ 01ರಿಂದ 31ರ ತನಕ ದೇಶದೆಲ್ಲೆಡೆ ಐದನೇ ಹಂತದ ಲಾಕ್ ಡೌನ್ ವಿಸ್ತರಿಸಿ ಆದೇಶ ನೀಡಿದೆ. ಆ ಸಮಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಪ್ಯೂ ವಿಧಿಸಲಾಗಿದ್ದು, ದ.ಕ. ಜಿಲ್ಲೆಯಲ್ಲೂ ಕಟ್ಟುನಿಟ್ಟಾಗಿ ಜರಿಗೆ ತರಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ರಾತ್ರಿ 9 ಗಂಟೆಯ ಬಳಿಕ ಮುಂಜಾನೆಯ 5 ಗಂಟೆಯ ತನಕ ವಾಹನ, ಜನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದೊಮ್ಮೆ ಯಾರಾದರೂ ನಿಯಮ ಉಲ್ಲಂಘಿಸಿ ತೆರಳಿದ್ದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ.
ಮಾಸ್ಕ್ ಧರಿಸದಿದ್ದಲ್ಲಿ ದಂಡ:
ಇನ್ನು ಸಾರ್ವಜನಿಕರಿ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶವನ್ನು ನೀಡಲಾಗಿದೆ. ಹಾಗೂ ಇತರ ಕಾರ್ಯಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮನೆಯಿಂದ ಹೊರ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕಾಗಿದೆ. ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ದಂಡ ಕಟ್ಟಿಟ್ಟ ಬುತ್ತಿಯಾಗಿದೆ.
ಮಾಸ್ಕ್ ಧರಿಸದ್ದೆ ನಗರ ಪ್ರದೇಶಗಳಲ್ಲಿ ಓಡಾಡಿದವರಿಗೆ 200 ರೂ ದಂಡ ವಿಧಿಸಲು ನಿರ್ಧರಿಸಲಾಗಿದೆ. ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ.