ಉಜಿರೆ, ಜೂ 01 (DaijiworldNews/SM): ವಿದ್ಯುತ್ ಆಘಾತದಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಲ್ಲಿನ ಅತ್ತಾಜೆ ಎಂಬಲ್ಲಿ ನಡೆದಿದೆ.
ಅತ್ತಾಜೆ ನಿವಾಸಿ ಉಜಿರೆಯಲ್ಲಿ ಎ.ಸಿ ಮೆಕ್ಯಾನಿಕ್ ಮಳಿಗೆ ನಡೆಸುತ್ತಿದ್ದ ಮುಹಮ್ಮದ್ ಸಿರಾಜ್ ಮೃತಪಟ್ಟ ಯುವಕ. ಕಕ್ಕಿಂಜೆಯ ಸಂಬಂಧಿಕರ ಮನೆಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆ ಮತ್ತು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತಾದರೂ ಅದಾಗಲೇ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.