ಮಂಗಳೂರು, ಜೂ. 02 (Daijiworld News/MB) : ಕ್ಷುಲ್ಲಕ ಕಾರಣಕ್ಕಾಗಿ ಸೋಮವಾರ ಯುವಕನ ಮೇಲೆ ತಲ್ವಾರ್ನಿಂದ ದಾಳಿ ನಡೆಸಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತರನ್ನು ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು ಮೋಕ್ಷಿತ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ.
ಪೊಲೀಸರು ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ತಂಡವೊಂದು ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಮಂಗಳೂರಿನ ಮರಕಡ ನಿವಾಸಿ ಕೀರ್ತನ್(20) ಮೃತಪಟ್ಟಿದ್ದು ನಿತಿನ್(20), ಮಣೇಶ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಐವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಹಾಗೆಯೇ ಇತರ ಆರೋಪಿಗಳ ಬಂಧನಕ್ಕೆ ಪ್ರಯತ್ನಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.