ಉಡುಪಿ, ಜೂ 02 (DaijiworldNews/SM): ಉಡುಪಿ ನಗರದಲ್ಲಿ ಜೂನ್ 4 ರಿಂದ ಬೀದಿ ಬದಿ ವ್ಯಾಪಾರಕ್ಕೆ ನಿಷೇಧ ವಿಧಿಸಲಾಗಿದೆ. ಬೀದಿಬದಿ ವ್ಯಾಪಾರಿಗಳು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಉಡುಪಿ ನಗರಾಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಎಲ್ಲಾ ರಸ್ತೆ ಬದಿ ವ್ಯಾಪಾರಿಗಳು ಮತ್ತು ರಸ್ತೆ ಬದಿ ವಾಹನಗಳಲ್ಲಿ ಹಣ್ಣು, ತರಕಾರಿ ಹಾಗೂ ರಖಂ ವ್ಯಾಪಾರ ನಡೆಸುವಂತಿಲ್ಲ. ಜೂನ್ 4 ರಿಂದ ತಮ್ಮ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ನಗರದ ಆದಿ ಉಡುಪಿ ಬಳಿ ಇರುವ ಎ.ಪಿಎಂ.ಸಿ ಮಾರುಕಟ್ಟೆಗೆ ಸ್ಥಳಾಂತರಿಸತಕ್ಕದ್ದು ಎಂದು ಆದೇಶ ನೀಡಿಲಾಗಿದೆ.
ಯಾವುದೇ ತರಕಾರಿ, ಹಣ್ಣು ಹಂಪಲು ವ್ಯಾಪಾರಸ್ಥರು ಎ.ಪಿ.ಎಂ.ಸಿ. ಮಾರುಕಟ್ಟೆಯ ಆವರಣವನ್ನು ಹೊರತುಪಡಿಸಿ, ನಗರದ ಯಾವುದೇ ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತ ಆನಂದ ಸಿ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.