ಮಂಗಳೂರು, ಜೂ 03 (Daijiworld News/MSP): ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ.
ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸೆನಗಲ್ನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿತ್ತು.ಬಂಧಿತ ರವಿ ಪೂಜಾರಿ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೇ 50ಕ್ಕೂ ಹೆಚ್ಚು ಪ್ರಕರಣಗಳಿವೆ.