ಉಡುಪಿ, ಜೂ 03 (DaijiworldNews/SM): ಜಿಲ್ಲೆಯಲ್ಲಿ ಇಂದು 851 ಮಂದಿಯ ವರದಿ ನೆಗೆಟಿವ್ ಬಂದಿದೆ. ಈ ನಡುವೆ 61 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇನ್ನು ಇಲ್ಲಿಯ ತನಕ ಜಿಲ್ಲೆಯಲ್ಲಿ 386 ಮಂದಿ ಸೋಂಕಿತರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೂಡ 4936 ಮಂದಿಯ ವರದಿ ಲಭಿಸಲು ಬಾಕಿ ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.