ಮಂಗಳೂರು, ಜೂ 06 (DaijiworldNews/PY) : ದ.ಕ ಜಿಲ್ಲೆಯಲ್ಲಿ ಜೂನ್ 6ರಂದು ಶನಿವಾರ 24 ಕೊರೊನಾ ಪ್ರಕರಣ ಪತ್ತೆಯಾಗಿದ್ದರೆ, ಉಡುಪಿಯಲ್ಲಿ 121 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 121 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಈ ನಡುವೆ ಶನಿವಾರದಂದು ಉಡುಪಿ ಜಿಲ್ಲೆಯಲ್ಲಿ 21 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 785 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದ.ಕ. ಜಿಲ್ಲೆಯಲ್ಲಿ ಇಂದು 24 ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ನಡುವೆ ಜಿಲ್ಲೆಯಲ್ಲಿ 15 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 88 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.