ಕಾಸರಗೋಡು, ಜೂ. 07 (DaijiworldNews/SM): ಜಿಲ್ಲೆಯಲ್ಲಿ ರವಿವಾರ ಮೂವರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಆರು ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರಲ್ಲಿ ಇಬ್ಬರು ಮಹಾರಾಷ್ಟ್ರ ಹಾಗೂ ಓರ್ವ ಕುವೈತ್ ನಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.
ಕುವೈಟ್ ನಿಂದ ಆಗಮಿಸಿದ್ದ ಕಾಞಂಗಾಡ್ ನಗರಸಭಾ ವ್ಯಾಪ್ತಿಯ 38 ವರ್ಷದ, ಮಹಾರಾಷ್ಟ್ರದಿಂದ ಬಂದಿದ್ದ ಚೆರುವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 33 ವರ್ಷದ, ಪುಲ್ಲೂರು-ಪೆರಿಯ ಗ್ರಾಮಪಂಚಾಯತ್ ವ್ಯಾಪ್ತಿಯ 63 ವರ್ಷದ ವ್ಯಕ್ತಿ ಸೋಂಕಿತರಾಗಿದ್ದಾರೆ. ಇವರೆಲ್ಲರೂ ಕ್ವಾರಂಟೈನ್ ನಲ್ಲಿದ್ದವರಾಗಿದ್ದಾರೆ.
ಇನ್ನು ಈ ನಡುವೆ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದ 6 ಮಂದಿ ಗುಣಮುಖರಾಗಿದ್ದಾರೆ. ಕುಂಬಳೆಯ ಮೂವರು, ಮಂಗಲ್ಪಾಡಿ , ಮಧೂರು ಮತ್ತು ಕೋಡೋ ಬೇಳೂರಿನ ತಲಾ ಒಬ್ಬರು ಗುಣಮುಖರಾಗಿದ್ದಾರೆ.
ಮೂರನೇ ಹಂತದಲ್ಲಿ ಸೋಂಕಿತರ ಸಂಖ್ಯೆ 150 ಕ್ಕೇರಿದೆ. ಈ ಪೈಕಿ 108 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 587 ಮಂದಿಯ ವೈದ್ಯಕೀಯ ವರದಿ ಲಭಿಸಬೇಕಿದೆ.