ಮಂಗಳೂರು, ಜೂ. 07 (DaijiworldNews/SM): ಮೇ 8ರ ಸೋಮವಾರದಿಂದ ರಾಜ್ಯದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಮತ್ತೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ಕರಾವಳಿಯಲ್ಲಿ ಸೋಮವಾರದಿಂದ ಬಹುತೇಕ ದೇವಸ್ಥಾನಗಳು ಭಕ್ತರಿಗೆ ಸೇವೆ ನೀಡಲಿವೆ.
ಯಾವ ಕ್ಷೇತ್ರಗಳಲ್ಲಿ ಭಕ್ತರಿಗೆ ಸೇವೆ ಇಲ್ಲ?
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ
ದ.ಕ. ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಭಕ್ತರಿಗೆ ಸೇವೆ ಲಭಿಸುವುದಿಲ್ಲ. ಮುಂದಿನ ಆದೇಶದ ತನಕ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಮಾಹಿತಿ ಲಭಿಸಿದೆ.
ಶ್ರೀ ಕೃಷ್ಣಮಠ ಉಡುಪಿ
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಮುಂದಿನ 30 ದಿನಗಳ ಕಾಲ ಭಕ್ತರಿಗೆ ಶ್ರೀ ಕೃಷ್ಣನ ದರ್ಶನಕ್ಕೆ ಅವಕಾಶವಿರುವುದಿಲ್ಲ. ಈ ಬಗ್ಗೆ ಪೇಜಾವರ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಕರಾವಳಿಯಲ್ಲಿ ಭಕ್ತರಿಗೆ ಸೇವೆ ನೀಡಲಿರುವ ದೇವಸ್ಥಾನಗಳು:
ಕರಾವಳಿಯಲ್ಲಿ ಎರಡು ಕ್ಷೇತ್ರಗಳು ಹೊರತುಪಡಿಸಿದಂತೆ ಉಳಿದ ಕ್ಷೇತ್ರಗಳಲ್ಲಿ ಭಕ್ತರಿಗೆ ಸೇವೆ ಲಭ್ಯವಿರಲಿದೆ. ಅಗತ್ಯ ಮುನ್ನೆಚ್ಚರಿಕೆಗಳನ್ನು ದೇವಸ್ಥಾನದ ವತಿಯಿಂದ ಕೈಗೊಳ್ಳಲಾಗಿದೆ. ಈ ನಡುವೆ ಅಷ್ಟೇ ಜವಾಬ್ದಾರಿ ಭಕ್ತರಿಗೂ ಇದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ತಪಾಸಣೆಗೆ ಒಳಪಡುವುದು ಇತ್ಯಾದಿ ಕಡ್ಡಾಯವಾಗಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ
ಪೊಳಲಿ ಕ್ಷೇತ್ರ
ಒಡಿಯೂರು ಕ್ಷೇತ್ರ
ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ
ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ