ಕುಂದಾಪುರ, ಜೂ 08 (DaijiworldNews/PY) : ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿ 3.50 ಲಕ್ಷ ರೂ ಪಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನನ್ನು ಶಂಕರನಾರಾಯಣ ಪೊಲೀಸರು ಬಂಧಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಕಮಲಶಿಲೆಯ ನಿವಾಸಿ ಸುರೇಶ ಕುಲಾಲ(27) ಎನ್ನಲಾಗಿದೆ.
ಆರೋಪಿ ಸುರೇಶ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಜಿಲ್ಲೆಯ ಜನತೆಯನ್ನು ಮತ್ತಷ್ಟು ಆತಂಕಕ್ಕೆದೂಡುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳಿ ತಿಳಿಸಿದ್ದಾರೆ.
ಸುಳ್ಳು ಸುದ್ದಿಯನ್ನು ಹರಿಯಬಿಡುವ ಮೂಲಕ ಕೊರೊನಾ ವೈರಸ್ ವಿರುದ್ದ ಹೋರಾಡುತ್ತಿರುವವರ ಆತ್ಮಸ್ಥೈರ್ಯ ಕುಗ್ಗುವಂತೆ ಹಾಗೂ ಇಲಾಖೆಗಳ ವಿರುದ್ದ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಅಶಾಂತಿ ಹಾಗೂ ಅನುಮಾನ ಮೂಡಿಸುವಂತೆ ಮಾಡಿದ್ದಾನೆ. ವಂಡ್ಸೆ ಕಂದಾಯ ನಿರೀಕ್ಷಕ ರಾಘವೇಂದ್ರ ಅವರು ಆರೋಪಿಯ ವಿರುದ್ದ ಕ್ರಮಕೈಗೊಳ್ಳಲು ಶಾಂಕರ ನಾರಾಯಣ ಪೊಲೀಸ್ ಠಾಣೆಗ ದೂರು ನೀಡಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.