ಮಂಗಳೂರು, ಜೂ 08 (DaijiworldNews/PY) : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಘೋಷಣೆ ವಿಚಾರ, ಮತ್ತೆ ವೆನ್ಲಾಕ್ ಆಸ್ಪತ್ರೆ ಸಾರ್ವಜನಿಕರಿಗೆ ಮುಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಎರಡು ದಿನಗಳಲ್ಲಿ ಮತ್ತೆ ಹೊರ ರೋಗಿಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. ವೆನ್ಲಾಕ್ ಆಸ್ಪತ್ರೆ ಕೊರೊನಾ ಆಸ್ಪತ್ರೆ ಎಂದು ಘೋಷಣೆಯಾದ ಬಳಿಕ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಸರ್ಕಾರಿ ಆಸ್ಪತ್ರೆ ಇಲ್ಲದೇ ಜನ ಸಾಮಾನ್ಯರಿಗೆ ಚಿಕಿತ್ಸೆಗೆ ತೊಂದರೆಯಾಗಿತ್ತು. ಆದರೆ, ಮತ್ತೆ ವೆನ್ಲಾಕ್ ಆಸ್ಪತ್ರೆಯು ಸಾರ್ವಜನಿಕ ಮುಕ್ತ ಎಂದು ತಿಳಿಸಿದ್ದಾರೆ.
ದೇಶಾದ್ಯಂತ ಕೊರೊನಾ ಸೋಂಕು ಹಿನ್ನೆಲೆ, ಜಿಲ್ಲೆಯಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಘೋಷಣೆ ಮಾಡಲಾಗಿತ್ತು.