ಉಡುಪಿ, ಜೂ 09 (DaijiworldNews/SM): ರಾಜ್ಯದಲ್ಲಿ ಶಾಲೆಗಳ ಆರಂಭಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ಹಲವು ರೀತಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಸದ್ಯ ಶಾಲೆಗಳು ಓಪನ್ ಆಗುವುದಿಲ್ಲ.
ಈ ಬಗ್ಗ್ಗೆ ಉಡುಪಿಯಲ್ಲಿ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಆಗಸ್ಟ್ ವರೆಗೂ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸರಕಾರ ಯಾವುದೇ ಲಾಬಿಗಳು ಒತ್ತಡಕ್ಕೆ ಮಣಿಯುವುದಿಲ್ಲ. ಈ ಬಗ್ಗೆ ಕೆಲವೊಂದು ಆರೋಪಗಳು ಕೇಳಿಬರುತ್ತಿವೆ. ವಿದ್ಯಾರ್ಥಿಗಳ ಹಿತ ಸರಕಾರಕ್ಕೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ತನ್ನ ನಿರ್ಧಾರ ಕೈಗೊಂಡಿದೆ. ಸದ್ಯ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ಮೊದಲ ಸವಾಲಾಗಿರುವುದರಿಂದ ಸದ್ಯ ಶಾಲೆಗಳನ್ನು ಆರಂಭಿಸುವ ನಿರ್ಧಾರ ಇಲ್ಲ ಎಂದಿದ್ದಾರೆ.
ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಬೇಕಾಗಿದೆ. ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಬೇಕೆಂಬುವುದು ಸರಕಾರ ಚಿಂತನೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.