ಮಾ,29: ಕಲಬುರ್ಗಿ ಜಿಲ್ಲೆಯ ಅಪ್ಝಲ್ ಪುರದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ್ , ಹಾಗೂ ಹೈದರಾಬಾದ್ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕ ಬಿಜೆಪಿ ಸೇರುವುದು ಬಹುತೇಕ ಪಕ್ಕ ಆಗಿದೆ. ರಾಜೀನಾಮೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ್ದ ಅವರು ಸ್ಪೀಕರ್ ಕೋಳಿವಾಡ ಅವರು ಲಭ್ಯವಾಗದ ಹಿನ್ನಲೆಯಲ್ಲಿ ರಾಜೀನಾಮೆ ಸಲ್ಲಿಸಲಾಗಿಲ್ಲ. ಇದಕ್ಕೂ ಮುಂಚೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಳಿಕ ಪತ್ರಿಕಾಗೋಷ್ಟಿ ನಡೆಸಿದ ಅವರು ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದರು.
ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಸಿಕೊಳ್ಳಲು ಒಪ್ಪಿಕೊಂಡಿದ್ದೆ. ಇದೀಗ ಆ ಸ್ಥಾನಕ್ಕೂ ರಾಜೀನಾಮೆ ನೀಡುವೆ . ಹಾಗೆಂದು ನಾನು ನಾನು ಸಚಿವ ಸ್ಥಾನ ನೀಡಲಿಲ್ಲ ಎಂದು ಬಿಜೆಪಿಗೆ ಸೇರುತ್ತಿಲ್ಲ. ರಾಜ್ಯದಲ್ಲಿ ಎನ್ಸಿಪಿಗೆ ಭವಿಷ್ಯ ಇಲ್ಲ ಎಂದು ಆ ಪಕ್ಷ ಸೇರಲಿಲ್ಲ ಎಂದರು. 'ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ, ಅಂಗೀಕಾರವಾದ ಬಳಿಕ ಬಿಜೆಪಿ ಸೇರ್ಪಡೆಯಾಗುತ್ತೇನೆ' ಎಂದರು. ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್ ಅವರು ಹೈದರಾಬಾದ್ ಕರ್ನಾಟಕದಲ್ಲಿ ತನ್ನದೇ ಆದ ಬೆಂಬಲಿಗರನ್ನು ಹೊಂದಿದ್ದಾರೆ. ಅವರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ಸಹ ಪ್ರಯತ್ನ ನಡೆಸಿತ್ತು.