ಮಂಗಳೂರು, ಜೂ 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ನಾಲ್ವರು ಕೂಡ ಪುರುಷರಾಗಿದ್ದಾರೆ. 29 ಹಾಗೂ 30 ವರ್ಷದ ಯುವಕರು, 40 ಹಾಗೂ 60 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಪೈಕಿ 29 ವರ್ಷದ ವ್ಯಕ್ತಿ ಉಡುಪಿ ಜಿಲ್ಲೆಯ್ ಕಾರ್ಕಳ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದಿಂದ್ದ ಬಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಇನ್ನು 60 ವರ್ಷದ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದಾರೆ. ಅವರು ಕೂಡ ಸೌದಿ ಅರೇಬಿಯಾದಿಂದ ಮರಳಿದ್ದು, ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ.
ಇನ್ನುಳಿದಂತೆ 30 ಹಾಗೂ 40 ವರ್ಷದ ವ್ಯಕ್ತಿಗಳು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಅವರನ್ನು ಉಡುಪಿಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅದರೆ ಅವರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ದ.ಕ. ಜಿಲ್ಲೆಗೆ ಕಳುಹಿಸಲಾಗಿತ್ತು. ಅವರಲ್ಲಿ ಇದೀಗ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಂದು ಪತ್ತೆಯಾದ ಎಲ್ಲಾ ಸೋಂಕಿತರಿ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ ಜಿಲ್ಲೆಗ್ಗೆ ಗುಡ್ ನ್ಯೂಸ್:
ಇನ್ನು ಈ ನಡುವೆ ಬುಧವಾರದಂದೂ ಕೂಡ ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಮಂಗಳವಾರದಂದು ಕೂಡ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿತ್ತು. ಇದೇ ಸನ್ನಿವೇಶ ಮುಂದುವರೆದಿದೆ. ಇನ್ನು ಕಳೆದ ಹಲವು ದಿನಗಳಿಂದ ನಿದ್ದೆಗೆಡಿಸಿದ್ದ ಕೊರೊನಾ ಸೋಂಕು ಉಡುಪಿಯಲ್ಲಿ ಸದ್ಯ ನಿಯಂತ್ರಣಕ್ಕೆ ಬಂದಂತಾಗಿದೆ.