ಮಂಗಳೂರು, ಜೂ 10 (DaijiworldNews/SM): ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಳ್ಳಾಬೇಕಾದ ನಿಯಮಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ಗೊಂದಲದಲ್ಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ದೊಡ್ಡ ಮಟ್ಟದ ತಪ್ಪನ್ನು ಮಾಡುತ್ತಿದೆ ಶಾಸಕ ಯು.ಟಿ. ಖಾದರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಯು.ಟಿ. ಖಾದರ್, ಕೊರೊನಾ ವಿಚಾರದಲ್ಲಿ ಸರ್ಕಾರ ಕೈಚೆಲ್ಲಿ ಕೂತಿದೆ. ಒಂದೂವರೆ ಎರಡು ತಿಂಗಳಲ್ಲಿ ಅನಾಹುತ ಆದರೆ ಹೊಣೆ ಯಾರು? ಎಂದು ಪ್ರಶ್ನಿಸಿರುವ ಅವರು, ನೀವು ಮಾಡಿದ ತಪ್ಪಿಗೆ ಜನರು ಬಲಿಯಾಗಬೇಕೇ? ಎಂದು ಗರಂ ಆಗಿದ್ದಾರೆ. ನೀವು ತಪ್ಪು ಮಾಡಿದ್ದೀರಿ ಎಂದು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಶಾಸಕ ಯು. ಟಿ. ಖಾದರ್ ಹೇಳಿದ್ದಾರೆ.