ಕಾಸರಗೋಡು, ಮಾ 30: ರೈಲು ಬಡಿದು ಇಬ್ಬರು ಯುವಕರು ಮೃತಪಟ್ಟು, ಇನ್ನೋರ್ವ ಅಪಾಯದಿಂದ ಪಾರಾದ ಘಟನೆ ಕುಂಬಳೆ ಸಮೀಪದ ಮೊಗ್ರಾಲ್ ಕೊಪ್ಪಳದಲ್ಲಿ ನಡೆದಿದೆ.

ಮೃತಪಟ್ಟವರನ್ನು ಉತ್ತರ ಪ್ರದೇಶದ ಮುಹಮ್ಮದ್ ಹುಸೈನ್ (19) ಮತ್ತು ಇಸಾರಾಹಿಲ್ (22) ಎಂದು ಗುರುತಿಸಲಾಗಿದೆ. ಜೊತೆಗಿದ್ದ ಶಕೀಲ್ ಎಂಬಾತ ಅಪಾಯದಿಂದ ಪಾರಾಗಿದ್ದಾನೆ.
ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮಂಗಳೂರಿಗೆ ತೆರಳುತ್ತಿದ್ದ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಟೈಲ್ಸ್ ಕೆಲಸ ಮಾಡುತ್ತಿದ್ದ ಮುಹಮ್ಮದ್ ಹುಸೈನ್ ಮತ್ತು ಇಸಾರಾಹಿಲ್ ಮೊಗ್ರಾಲ್ ಪುತ್ತೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಕುಂಬಳೆ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗರದಲ್ಲಿರಿಸಲಾಗಿದೆ.