ಮಂಗಳೂರು, ಜೂ 12 (DaijiworldNews/SM): ಉಡುಪಿ ಹಾಗೂ ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 39 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು 17 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇನ್ನುಳಿದಂತೆ 22 ಮಂದಿ ಸೋಂಕಿತರು ಉಡುಪಿ ಜಿಲ್ಲೆಯವರಾಗಿದ್ದಾರೆ.
ದ.ಕ. ಜಿಲ್ಲೆಯ ಸೋಂಕಿತರ ಪೈಕೊ 14 ಮಂದಿ ಸೌದಿ ಅರೇಬಿಯಾದಿಂದ ಬಂದವರಾಗಿದ್ದಾರೆ. ಉಳಿದಂತೆ ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಮತ್ತೊಂದು ಮೂಲ ಪತ್ತೆಯಾಗದ (ಸಾರಿ) ಪ್ರಕರಣವಾಗಿದೆ.
ಇನ್ನು ಸೋಂಕಿತರ ಪೈಕಿ 16 ಜನ ಪುರುಷರಾಗಿದ್ದಾರೆ. ಮತ್ತು ಒಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ ಶುಕ್ರವಾರದಂದು ಜಿಲ್ಲೆಯಲ್ಲಿ ನಾಲ್ವರು ಗುಣಮುಖರಾಗಿದ್ದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಉಡುಪಿಯಲ್ಲಿ 22 ಮಂದಿಗೆ ಕೊರೊನಾ ಪಾಸಿಟಿವ್:
ಇನ್ನು ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಂದಿದ್ದ ಸೋಂಕು ಇದೀಗ ಮತ್ತೆ ಪತ್ತೆಯಾಗುತ್ತಿದೆ. ಶುಕ್ರವಾರ ಒಂದೇ ದಿನ ಉಡುಪಿಯಲ್ಲಿ 22 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 991ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದ 21 ಜನರಲ್ಲಿ ಸೋಂಕು ಧೃಡಪಟ್ಟಿದೆ. ಸೋಂಕಿತ ಲ್ಯಾಬ್ ಟೆಕ್ನೀಷನ್ ಮನೆಯ ವ್ಯಕ್ತಿಗೂ ಕೊರೊನಾ ಸೋಂಕು ಪತ್ತೆಯಾಗಿದೆ. ಇನ್ನು ಸೋಂಕಿತರ ಪೈಕಿ 13 ಮಂದಿ ಪುರುಷರಾಗಿದ್ದು, 6 ಮಂದಿ ಮಹಿಳೆಯರು ಹಾಗೂ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ.