ಪುತ್ತೂರು ಏ 1: ಸಂಪ್ಯ ಮಸೀದಿ ಮುಂಭಾಗದಲ್ಲಿ ಶನಿವಾರ ವ್ಯಾಗನರ್ ಕಾರು ಹಾಗೂ ಕೆಎಸ್ ಆರ್ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಯುವ ವಕೀಲೆ ಸಾವಿಗೀಡಾದ ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದ ಬೆಳ್ತಂಗಡಿಯ ಕುಳ ನಿವಾಸಿ ಗಾಯತ್ರಿ (23) ಮೃತ ವಕೀಲೆ.ಇವರ ಸಂಬಂಧಿ ಯೋಗೀಶ (35) ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಗಾಯತ್ರಿ ಅವರನ್ನು ಕೂಡ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.