ಮಂಗಳೂರು, ಜೂ 15 (DaijiworldNews/PY) : ದ.ಕ ಜಿಲ್ಲೆಯಲ್ಲಿ ಸೋಮವಾರ 23 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿಯಲ್ಲಿ 2 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ದ.ಕ. ಜಿಲ್ಲೆಯಲ್ಲಿ ಇಂದು 23 ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈ ನಡುವೆ ಜಿಲ್ಲೆಯಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 149 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 2 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಂದು 23 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 291 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.