ಬೆಳ್ತಂಗಡಿ, ಜೂ. 16 (DaijiworldNews/SM): ಡೆಂಗ್ಯೂ ಜ್ವರ ತೀವ್ರ ಉಲ್ಬಣಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಗ್ಯೂ ಜ್ವರದಿಂದ ಮೃತಪಟ್ಟವರಾಗಿದ್ದಾರೆ.
ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಜ್ವರ ತೀವ್ರ ಉಲ್ಬಣಗೊಂಡ ಪರಿಣಾಮ ಜೂ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಕೃಷಿಕರಾಗಿದ್ದು, ಸಾಮಾಜಿಕ, ರಾಜಕೀಯ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.