ಮಂಗಳೂರು, ಜೂ. 16 (DaijiworldNews/SM): ದ.ಕ ಜಿಲ್ಲೆಯಲ್ಲಿ ಮತ್ತೆ 79 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಸೋಂಕಿತರ ಪೈಕಿ ೭೫ ಮಂದಿ ಸೌದಿ ಆರೇಬಿಯಾದಿಂದಮರಳಿದವರಾಗಿದ್ದಾರೆ. ಇನ್ನುಳಿದಂತೆ ಮೂವರು ಮಹಾರಾಷ್ಟ್ರದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ದ.ಕ ಜಿಲ್ಲೆಯಲ್ಲಿ 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 217 ಮಂದಿಯ ವರದಿ ನೆಗೆಟಿವ್ ಬಂದಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲಾ 7 ಮಂದಿ ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,035ಕ್ಕೆ ಏರಿಕೆಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ೮೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.