ಮಂಗಳೂರು, ಜೂ.17 (DaijiworldNews/MB) : ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಉದ್ಯೋಗದಲ್ಲಿದ್ದರೆ ಆ ಪೈಕಿ ಒಬ್ಬರು ಮಾತ್ರ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದ್ದಾರೆ.
ಈ ಬಗ್ಗೆ ಜೂನ್ 16 ರ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಗೂ ಕ್ಷೌರಿಕರಿಗೆ ಪರಿಹಾರವನ್ನು ವಿಸ್ತರಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಹೇಳಿದರು.
ಬಿಪಿಎಲ್ ಕಾರ್ಡ್ ಹೊಂದಿರುವ ಇತರ ಜಿಲ್ಲೆಗಳು ಮತ್ತು ರಾಜ್ಯಗಳ ಕಾರ್ಮಿಕರು ಕೂಡಾ ಸರ್ಕಾರವು ನೀಡುತ್ತಿರುವ 5,000 ರೂ.ಗಳ ಆರ್ಥಿಕ ಸಹಾಯವನ್ನು ಪಡೆಯಬಹುದು. ಫಲಾನುಭವಿಗಳು ತಮ್ಮ ಅರ್ಜಿಗಳನ್ನು ಭರ್ತಿ ಮಾಡಬೇಕು. ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ಭಾವಚಿತ್ರ ಅಪ್ಲೋಡ್ ಮಾಡಬೇಕು. ಕ್ಷೌರಿಕ, ಅಗಸ ವೃತ್ತಿ ಮಾಡುತ್ತಿರುವ ಕುರಿತಾಗಿ ಉದ್ಯೋಗ ಪ್ರಮಾಣಪತ್ರ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ನ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ , ಪಿಡಿಒ, ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು ಇವರ ಪೈಕಿ ಯಾವುದೇ ಅಧಿಕಾರಿಗಳು ದೃಢೀಕರಿಸಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಾಗೆಯೇ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿದಾರರು ತಮ್ಮ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂದು ಅಧಿಕಾರಿಗಳನ್ನುಪರಿಶೀಲಿಸಿ ನಿಗದಿತ ಸಮಯದೊಳಗೆ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ಕಾರ್ಮಿಕ ಇಲಾಖೆ ಅಧಿಕಾರಿ ವಿಲ್ಮಾ ಮತ್ತು ಇತರರು ಉಪಸ್ಥಿತರಿದ್ದರು