ಮಂಗಳೂರು, ಜೂ 18 (DaijiworldNews/PY) : ಕೊರೊನಾ ಲಾಕ್ಡೌನ್ ಘೋಷಣೆಯಿಂದಾಗಿ ಮುಂದೂಡಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18 ರಂದು ಗುರುವಾರ ನಡೆಸಲಾಗುತ್ತಿದ್ದು, 26,942 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಿದ್ದು, ದ.ಕ ಹಾಗೂ ಉಡುಪಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳನ್ನು ತಲುಪಿದ್ದಾರೆ. ಕೇರಳದಿಂದ ಮಂಗಳೂರಿಗೆ ಬರಲಿರುವ 1,137 ಮಂದಿ ವಿದ್ಯಾರ್ಥಿಗಳಿಗೆ ತಲಪಾಡಿಯಿಂದ 32 ಬಸ್ಗಳ ವ್ಯವಸ್ಥೆ ಮಾಡಲಾಯಿತು. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಬಳಿಸಿ ಪರೀಕ್ಷಿಸಲಾಯಿತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದರು. ಪರೀಕ್ಷಾ ಕೇಂದ್ರಗಳಲ್ಲಿನ ಸಿಬ್ಬಂದಿಗಳೂ ಕೂಡಾ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರೆ.
ಇನ್ನೂ ಪ್ರತೀ ಕೋಣೆಯಲ್ಲಿ 24 ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯವಿರುವ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಇಲಾಖೆಯಿಂದ ಓರ್ವ ವೈದ್ಯೆ, ನರ್ಸ್ ಅನ್ನು ನಿಯೋಜನೆ ಮಾಡಲಾಗಿದೆ. ಇದರೊಂದಿಗೆ, ಪರೀಕ್ಷಾ ಕೇಂದ್ರಗಳಿಗೆ 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.