ಪುತ್ತೂರು, ಜೂ 19 (Daijiworld News/MSP): ಡೆಂಗ್ಯೂ ಜ್ವರಕ್ಕೆ ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ (32) ಎಂದು ಗುರುತಿಸಲಾಗಿದೆ.

ನಸೀಮಾ ಅವರು ಕಳೆದ ಒಂದು ವಾರದಿಂದ ಜ್ವರ ದಿಂದ ಬಳಲುತ್ತಿದ್ದು ಪುತ್ತೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಜೂ. 18 ರಂದು ತಡರಾತ್ರಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ
ಪುತ್ತೂರು ತಾಲೂಕಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಎರಡನೆ ಪ್ರಕರಣ ಇದಾಗಿದ್ದು, ವಾರದ ಹಿಂದೆ ಬೆಟ್ಟಂಪಾಡಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಜನವರಿಯಿಂದ ಜೂನ್ ತಿಂಗಳ ಅರ್ಧದವರೆಗೆ ಸುಮಾರು 110 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ.