ಮಂಗಳೂರು, ಜೂ 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ದ.ಕ. ಜಿಲ್ಲೆಯಲ್ಲಿ 11 ಮಂದಿ ವಿದೇಶದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ. ಎರಡು ಪ್ರಕರಣಗಳು ಐಎಲ್ ಐ ಪ್ರಕರಣವೆಂದು ಗುರುತಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಸದ್ಯ 209 ಸಕ್ರಿಯ ಪ್ರಕರಣಗಳಿವೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಈ ದಿನ 11 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಇನ್ನು ಉಡುಪಿಯಲ್ಲಿ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ.