ಉಳ್ಳಾಲ, ಜೂ 20 (Daijiworld News/MSP): ಉಳ್ಳಾಲ ಸೇತುವೆ ಬಳಿ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಅವರ ಮೃತದೇಹ ಪತ್ತೆಯಾಗಿದೆ. ಶನಿವಾರ ಮುಂಜಾನೆ ನದಿಯಲ್ಲಿ ತೇಲುತಿದ್ದ ಶವವನ್ನು ಕಂಡ ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.

ಮೃತ ವ್ಯಕ್ತಿಯನ್ನು ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ಇವರು ಶುಕ್ರವಾರ ಅಪರಾಹ್ನ ಉಳ್ಳಾಲ ಸೇತುವೆ ಬಳಿ ನಾಪತ್ತೆಯಾಗಿರುವುದರಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಶಂಕಿಸಲಾಗಿತ್ತು. ಅಲ್ಲದೆ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು
ಮೃತ ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. , ಅವರಿಗೆ ವಿಪರೀತ ಕುಡಿತದ ಚಟವಿತ್ತು ಎನ್ನಲಾಗಿದೆ ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.
ಕಂಕನಾಡಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.