ಮಂಗಳೂರು, ಜೂ 20 (DaijiworldNews/PY) : ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಇಂದು 15 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 197 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 13 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಂದು 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 108 ಸಕ್ರಿಯ ಪ್ರಕರಣಗಳಿವೆ.