ಕಡಬ, ಜೂ 22 (Daijiworld News/MSP): ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಸಮೀಪ ಎರಡು ಬೈಕ್ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಗಾಯಾಳ್ಯ್ಗಳನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ಹಾಗೂ ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.