ಬೆಳ್ತಂಗಡಿ, ಜೂ.21 (DaijiworldNews/MB) : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ಮೇಲೆ ಜೂನ್ ೨೨ ರ ಸೋಮವಾರ ಮಧ್ಯಾಹ್ನ ಎಸಿಬಿ ದಾಳಿ ನಡೆದಿದೆ.

ಕಲ್ಮಂಜ ಪಂಚಾಯತ್ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತಾಗಿ ದೂರುಗಳು ಕೇಳಿಬಂದಿರುವ ಕಾರಣದಿಂದಾಗಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸದ್ಯ ಅಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕಚೇರಿಯೊಳಗೆ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.