ಮಂಗಳೂರು, ಜೂ 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ನಡುವೆ ಸೋಮವಾರದಂದು 257 ಮಂದಿಯ ವರದಿ ನೆಗೆಟಿವ್ ಬಂದಿದೆ.

ಜಿಲ್ಲೆಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳ ಪೈಕಿ 11 ಮಂದಿ ವಿದೇಶದಿಂದ ಮರಳಿದವರಾಗಿದ್ದಾರೆ. ಉಳಿದಂತೆ ಒಬ್ಬರ ಪಾಸಿಟಿವ್ ಪ್ರಕರಣ ಐ ಎಲ್ ಐ ಎಂದು ಗುರುತಿಸಲಾಗಿದೆ. 64, 44, 42, 41, 37, 37, 33 ವರ್ಷದ ಪುರುಷರಲ್ಲಿ ಸೋಂಕು ದೃಢಪಟ್ಟರೆ, ಉಳಿದಂತೆ 45 ವರ್ಷದ ಓರ್ವ ಮಹಿಳೆಯಲ್ಲೂ ಪಾಸಿಟಿವ್ ಕಂಡುಬಂದಿದೆ. ಇನ್ನುಳಿದಂತೆ, 25, 23 ವರ್ಷದ ಇಬ್ಬರು ಯುವಕರನ್ನು ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
12 ಮಂದಿ ಗುಣಮುಖ:
ಇನ್ನು ಈ ನಡುವೆ ಸೋಮವಾರದಂದು ಜಿಲ್ಲೆಯಲ್ಲಿ ಹನ್ನೆರಡು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುಣಮುಖರಾದ ಎಲ್ಲರೂ ಕೂಡ ಪುರುಷರಾಗಿದ್ದಾರೆ. 57, 52, 48, 47, 40, 38 ವ್ಯಕ್ತಿಗಳು ಗುಣಮುಖರಾಗಿದ್ದಾರೆ. ಅಲ್ಲದೆ, 29, 28ವರ್ಷದ ಮೂವರು, 26 ವರ್ಷದ ಇಬ್ಬರು ಯುವಕರು ಸೇರಿದಂತೆ 12 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.