ಬೆಳ್ತಂಗಡಿ, ಜೂ 24(Daijiworld News/MSP): ಬ್ಯಾಂಕ್ ಸಿಬ್ಬಂದಿಯೊಬ್ಬರು ಕರ್ತವ್ಯಕ್ಕೆ ಆಗಮಿಸುತ್ತಿದ್ದಾಗ ಸರಕಾರಿ ಬಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕು ರಾಮಲ್ಕಟ್ಟೆ ನಿವಾಸಿ ಚನಿಯ ನಾಯ್ಕ್(57) ಎಂಬವರೆಂದು ಗುರುತಿಸಲಾಗಿದೆ
ಇವರು ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್.ಬಿ.ಐ) ಇದರ ಸೀನಿಯರ್ ಅಸಿಸ್ಟೆಂಟ್ ಆಗಿದ್ದ ಕಾರ್ಯನಿರ್ವಹಿಸುತ್ತಿದ್ದರು. ಇವರು ಎಂದಿನಂತೆ ಬೆಳಿಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಅಸುನೀಗಿದ್ದರು.
ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ಮೃತರ ಮನೆಗೆ ಬೆಳ್ತಂಗಡಿ ಎಸ್.ಬಿ.ಐ ಮೆನೇಜರ್ ಅರವಿಂದ ನಾಯಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ