ಪುತ್ತೂರು, ಜೂ. 24 (DaijiworldNews/MB) : ನಗರಸಭಾ ವ್ಯಾಪ್ತಿಯಲ್ಲಿ ಎರಡನೇ ಪ್ರಕರಣ ದಾಖಲಾಗಿದ್ದು ಬನ್ನೂರಿನಲ್ಲಿರುವ ಪತ್ನಿಯ ಮನೆಗೆ ಬಂದ ಕಲ್ಲಂದಡ್ಕ ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ.
ಕಲ್ಲಂದಡ್ಕದ ಸುಮಾರು 42 ವರ್ಷ ಪ್ರಾಯದ ವ್ಯಕ್ತಿಯು ಬನ್ನೂರಿನಲ್ಲಿರುವ ಚೆಲುವಮ್ಮನ ಕಟ್ಟೆ ಬಳಿಯ ತನ್ನ ಪತ್ನಿಯ ತವರು ಮನೆಗೆ ಬಂದಿದ್ದು ಅವರಿಗೆ ಶೀತ ಜ್ವರವಿದ್ದ ಕಾರಣ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದ್ದರು. ಅಲ್ಲಿ ಅವರ ಗಂಟಲ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆ ಸಂಗ್ರಹಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.
ಕೊರೊನಾ ದೃಢಪಟ್ಟಿರುವ ಹಿನ್ನಲೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ವ್ಯಕ್ತಿಯ ಪತ್ನಿ ಮತ್ತು ಆಕೆಯ 10 ದಿನದ ಮಗುವನ್ನು ಮನೆಯಲ್ಲೇ ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು ವರದಿ ತಿಳಿಸಿದೆ.