ಮಂಗಳೂರು, ಜೂ. 25 (DaijiworldNews/MB) : ಮಂಗಳೂರಿನಲ್ಲಿ ಐವರು ವೈದ್ಯರಿಗೆ ಸೋಂಕು ದೃಢ ಹಿನ್ನಲೆಯಲ್ಲಿ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ವೈದ್ಯವರ್ಗವೂ ಭಯಪಡಬೇಕಾಗಿಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ದಾಯ್ಜಿವಲ್ಡ್ ಜೊತೆ ಮಾತನಾಡಿದ ಅವರು, ಜಿಲ್ಲೆಯ ಜನತೆ ಹಾಗೂ ವೈದ್ಯವರ್ಗ ಆತಂಕ ಪಡಬೇಕಾಗಿಲ್ಲ. ಸೋಂಕಿತ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಅದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲಾಡಳಿತವು ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದ್ದು ಸೋಂಕು ಹರಡದಂತೆ ಮುನ್ನೆಚ್ಚರಿಕೆಯನ್ನೂ ವಹಿಸಲಾಗಿದೆ. ಜನರು ಈ ಬಗ್ಗೆ ಯಾವುದೇ ಆತಂಕ ಪಡಬಾರದು ಎಂದು ತಿಳಿಸಿದ್ದಾರೆ.