ಉಳ್ಳಾಲ, ಜೂ. 27 (DaijiworldNews/MB) : ಉಳ್ಳಾಲದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಉಳ್ಳಾಲದಲ್ಲಿ ಸಾವನ್ನಪ್ಪಿದ ವೃದ್ಧೆ ಸೇರಿ ಇಬ್ಬರು ಪೊಲೀಸ ಸಹಿತ ಐವರಿಗೆ ಕೊರೊನಾ ದೃಢಪಟ್ಟಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆಯಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ನಿರ್ಧಾರ ಕೈಗೊಂಡಿದ್ದಾರೆ.
ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ಉಳ್ಳಾಲದ ಮೀನುಗಾರರು, ರಿಕ್ಷಾ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ನಡೆಸಲು ಕೂಡಾ ತೀರ್ಮಾನಿಸಲಾಗಿದೆ.
ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತ ಮಾಡುವಂತೆ ಧಾರ್ಮಿಕ ಕೇಂದ್ರಗಳ ಮುಖಂಡರ ಸಭೆ ನಡೆಸಿ ಖಾದರ್ ಅವರು ಸಲಹೆ ನೀಡಿದ್ದಾರೆ.