ಉಡುಪಿ: ಜೂ 27 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ 14 ಮಾಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ನಡುವೆ 10 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಶನಿವಾರ ಪತ್ತೆಯಾದ ಪ್ರಕರಣಗಳ ಪೈಕಿ ಐವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಒಬ್ಬರು ತೆಲಂಗಾಣದಿಂದ ಮರಳಿದವರಾಗಿದ್ದಾರೆ. ಉಳಿದಂತೆ ಆರು ಮಂದಿ ಉಡುಪಿ ನಿವಾಸಿಗಳಲ್ಲೇ ಸೋಂಕು ದೃಢಪಟ್ಟಿದೆ. ಬೆಂಗಳೂರು, ಕುಮಟಾದಿಂದ ಬಂದ ಇಬ್ಬರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1139ಕ್ಕೆ ಏರಿಕೆಯಾಗಿದೆ. ಈ ಪೈಕಿ ಬಹುತೇಕರು ಗುಣಮುಖಾರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 90 ಮಂದಿ ಮಾತ್ರವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.