ಉಡುಪಿ, ಜೂ. 28 (DaijiworldNews/MB) : ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದ್ದು ಸೋಮವಾರದ ಒಳಗಾಗಿ ವರದಿ ಬಾರದಿದ್ದಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ತಿಳಿದು ಬಂದಿದೆ.
ಹಾಗೆಯೇ ವರದಿಯು ನೆಗೆಟಿವ್ ಬಂದಲ್ಲಿ ವಿದ್ಯಾರ್ಥಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.