ಉಡುಪಿ, ಜೂ. 29 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 18 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಅಧಿಕೃತ ಮಾಹಿತಿ ನೀಡಿದ್ದಾರೆ.
ಈ ಪೈಕಿ ಮಹಾರಾಷ್ಟ್ರದಿಂದ ಬಂದ 5 ಜನರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಬೆಂಗಳೂರಿನಿಂದ ವಾಪಾಸಾಗಿದ್ದ ನಾಲ್ವರಲ್ಲಿ ಸೋಂಕು ಧೃಡಪಟ್ಟಿದೆ. ಅಲ್ಲದೆ, ಉಡುಪಿಯ 9 ಜನರಲ್ಲಿ ಕೊರೊನಾ ಇರುವುದು ತಿಳಿದುಬಂದಿದೆ.
ಎಲ್ಲಾ ಸೋಂಕಿತರಿಗೂ ಪ್ರಾಥಮಿಕ ಸಂಪರ್ಕದಿಂದ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಹೆಬ್ರಿ ಸಮುದಾಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನರ್ಸ್ ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನು ಸದ್ಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಇನ್ನು ಉಡುಪಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1197ಕ್ಕೆ ಏರಿಕೆಯಾಗಿದೆ.