ಮಂಗಳೂರು, ಜೂ. 29 (DaijiworldNews/SM): ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಜನತೆ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡುವುದು ಅತೀ ಅಗತ್ಯವಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಕೈಗಳನ್ನು ಸ್ಯಾನಿಟೈಸರ್ ಮೂಲಕ ಶುದ್ಧಿಯಾಗಿಡಬೇಕು. ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಅನವಶ್ಯಕವಾಗಿ ಯಾರೂ ಕೂಡ ಮನೆಯಿಂದ ಹೊರಗಡೆ ಬರಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಎ ಸಿಂಪ್ಟಮ್ಯಾಟಿಕ್ ಇದ್ದರೆ ಮಾತ್ರ ಕೊರೊನಾ ದೃಢಪಡುವುದಿಲ್ಲ. ಇತರ ರೋಗಗಳಿಗೆ ಪರೀಕ್ಷೆ ಮಾಡಿದಾಗಲೂ ಸೋಂಕು ದೃಢವಾಗುತ್ತದೆ. ಮುಂಜಾಗೃತ ಕ್ರಮವಾಗಿ ಕೊರೊನಾ ಸೋಂಕು ಪರೀಕ್ಷೆ ನಡೆಸಬೇಕು. ಸಾರ್ವಜನಿಕರು ಸೋಂಕಿನ ಬಗ್ಗೆ ಆತಂಕ ಪಡುವುದು ಬೇಡ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಧೈರ್ಯ ತುಂಬಿದ್ದಾರೆ.