ಮಂಗಳೂರು, ಜೂ 30 (Daijiworld News/MSP): ಮಂಗಳೂರು ಕೇಂದ್ರ ಕಾರಾಗೃಹ ದ ಖೈದಿ ಹಾಗೂ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಸಿಬ್ಬಂದಿಯಲ್ಲೂ ಕೊರೊನಾ ಪಾಸಿಟಿವ್ ಬಂದಿದೆ.
ಮಂಗಳೂರು ಕೇಂದ್ರ ಕಾರಾಗೃಹದ ವಿಚಾರಣಾಧೀನ ಖೈದಿ ಮನೋರೋಗದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೀಗಾಗಿ ಈತನಿಗೆ ಆಸ್ಪತ್ರೆ ಸಿಬ್ಬಂದಿ ಯಿಂದ ಕೊರೊನಾ ಹರಡಿರುವ ಶಂಕೆ ವ್ಯಕ್ತವಾಗಿದ್ದು ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ.
ಇನ್ನು ಮಂಗಳೂರು ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣೆ ಸಿಬ್ಬಂದಿಯಲ್ಲೂ ಕೊರೊನಾ ದೃಢಪಟ್ಟಿದ್ದು, ಇವರು ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಲ್ಲಿ ಕೊರೊನಾ ದೃಢಪಟ್ಟಿದ್ದು, ತನ ಸಂಪರ್ಕದಿಂದ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಸದ್ಯ ಇವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.