ಮಂಗಳೂರು, ಜೂ 30 (DaijiworldNews/SM): ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಮಂಗಳೂರು ತಾಲೂಕಿನಾದ್ಯಂತ ಕೊರೊನಾ ಸೋಂಕು ಭೀತಿ ಹೆಚ್ಚುತ್ತಿರುವುದರಿಂದ ತಾಲೂಕು ಪಂಚಾಯತ್ ಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಒಂದು ವಾರಗಳ ಕಾಲ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಜುಲೈ 1 ರಿಂದ 7ರವರೆಗೆ ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.