ಮಂಗಳೂರು, ಜು. 01 (DaijiworldNews/MB) : ದ.ಕ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು ಬುಧವಾರ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಈ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ 16 ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಯುವಕ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಬುಧವಾರ ಬೆಂಗ್ರೆ ನಿವಾಸಿ 51 ವರ್ಷದ ಪುರುಷ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಹಾಗೆಯೇ ಭಟ್ಕಳ ಮೂಲದ ಯುವಕ ಕೂಡಾ ಕೊರೊನಾಗೆ ಬಲಿಯಾಗಿದ್ದು ದ. ಕ. ಜಿಲ್ಲೆಯಲ್ಲಿ ಒಂದು ದಿನದಲ್ಲೇ ಇಬ್ಬರು ಬಲಿಯಾಗಿದ್ದಾರೆ.