ಉಡುಪಿ, ಜು.01 (DaijiworldNews/SM): ಜಿಲ್ಲೆಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಪ್ರಾಥಮಿಕ ಸಂಪರ್ಕದಿಂದ ಸುಮಾರು 14 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಿಂದ ಮರಳಿದ ಐವರಲ್ಲಿ, ತೆಲಂಗಾಣದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇನ್ನುಳಿದಂತೆ, ಅಬುದಾಬಿಯಿಂದ ವಾಪಾಸ್ಸಾದ 1 ವರ್ಷದ ಮಗುವಿಗೆ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಬೆಂಗಳೂರಿಂದ ಬಂದ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಈ ವರೆಗಿನ ಒಟ್ಟು 1228 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1069 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 156 ಮಂದಿ ಮಾತ್ರವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು ಮೂರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.