ಮಂಗಳೂರು, ಜು.01 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 84 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಸೋಂಕಿತರ ಸಂಖ್ಯೆ 823ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯಲ್ಲಿ ಇಂದು ಒಬ್ಬರು ಗುಣಮುಖರಾಗಿ ಆಸ್ಪತೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ ಗುಣಮುಖರಾದವರ ಸಂಖ್ಯೆ 444ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 372 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಪೈಕಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರು ಯಾರು?
38 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.
ಶಾರ್ಜಾದಿಂದ ಮರಳಿರುವ 6 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಅಂತರ್ರಾಜ್ಯ ಪ್ರಯಾಣದ ಮೂಲಕ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಬುಧವಾರದಂದು 28 ಐಎಲ್ಐ ಪ್ರಕರಣಗಳು ಪತ್ತೆಯಾಗಿವೆ.
7 ಮಂದಿ ಸೋಂಕಿತರ ಸಂಪರ್ಕದ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಪ್ರೀ ಸರ್ಜರಿ ಸ್ಯಾಂಪಲ್- ನಾಲ್ಕು ಮಂದಿ.