ಮಂಗಳೂರು, ಜು 02 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ.
ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು.
ಬುಧವಾರವಷ್ಟೇ ಜಿಲ್ಲೆಯಲ್ಲಿ ಕೊರೊನಾಗೆ 72 ವರ್ಷದ ಬೆಂಗ್ರೆ ನಿವಾಸಿ , ಭಟ್ಕಳದ 31 ವರ್ಷದ ಯುವಕ ಹಾಗೂ ಉತ್ತರ ಕನ್ನಡ ಮೂಲದ 76 ವರ್ಷದ ವೃದ್ದ ಬಲಿಯಾಗಿದ್ದರು.