ಮಂಗಳೂರು, ಜು. 02 (DaijiworldNews/MB) : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು ಇದೀಗ ಕೊರೊನಾ ಲ್ಯಾಬ್ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಲ್ಯಾಬ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಾತ್ರವಲ್ಲದೆಯೇ ಕೊರೊನಾ ಸಾವಿನ ಸಂಖ್ಯೆಯು ಏರಿಕೆಯಾಗುತ್ತಿದ್ದು ಜಿಲ್ಲೆಯಲ್ಲಿ ಈ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ. ಕೊರೊನಾ ವಾರಿಯರ್ಸ್ ಆದ ವೈದ್ಯರು ಹಾಗೂ ಪೊಲೀಸರಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದೆ.