ಉಡುಪಿ, ಜು 02 (DaijiworldNews/SM): ಉಡುಪಿಯಲ್ಲಿ ಮತ್ತೆ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಕೇರಳದಿಂದ ಮರಳಿದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಇನ್ನು ಬೆಂಗಳೂರಿನಿಂದ ಮರಳಿದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕದಿಂದ ಐವರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಉಡುಪಿಯಲ್ಲಿ 21 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಈ ವರೆಗಿನ ಒಟ್ಟು 1242 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ 1090 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 149 ಮಂದಿ ಮಾತ್ರವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಒಟ್ಟು ಮೂರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.