ಮಂಗಳೂರು, ಜು 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 90 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 40 ಮಂದಿಯ ವರದಿ ನೆಗೆಟಿವ್ ಬಂದಿದೆ.
ದ.ಕ. ಜಿಲ್ಲೆಯಲ್ಲಿ ಗುರುವಾರ 130 ಮಂದಿಯ ವರದಿ ಲಭ್ಯವಾಗಿತ್ತು. ಸೋಂಕಿತರ ಪೈಕಿ 15 ಮಂದಿ ಕುವೈಟ್, ಸೌದಿ, ದುಬೈಯಿಂದ ಮರಳಿದವರಾಗಿದ್ದಾರೆ. 19 ಮಂದಿಯಲ್ಲಿ ಐಎಲ್ ಐ ಪ್ರಕರಣದ ಮೂಲಕ ಸೋಂಕು ದೃಢಪಟ್ಟಿದೆ. ಎಂಟು ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 17 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.
ಇನ್ನು ಈ ನಡುವೆ 33 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ 913 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 477 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 428 ಮಂದಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.